Skip to Content

ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಹೆಚ್ಚು ಮಳೆಯಾಗು ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.


Heavy Rain School Holiday Decleared : ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರೆದೆ. ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಹೆಚ್ಚು ಮಳೆಯಾಗು ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ದಕ್ಷಿಣ ಕನ್ನಡದಾದ್ಯಂತ ಶುಕ್ರವಾರ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಹೀಗಾಗಿ, ಜಿಲ್ಲಾಡಳಿತವು ಶುಕ್ರವಾರ ಅಂಗನವಾಡಿಯಿಂದ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯುಸಿ) ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ ಪದವಿ, ಸ್ನಾತಕ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.